ಧಾರವಾಡ: 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ www.bcwd.karnataka.gov.in ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ-ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ ರೂ.2.50 ಲಕ್ಷ. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1 ಲಕ್ಷ ಮೀರಿರಬಾರದು. ಅರ್ಜಿಸಲ್ಲಿಸಲು ಫೆಬ್ರವರಿ 10 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ತಾಂತ್ರಿಕ ಅಡಚಣೆಗಳಾದಲ್ಲಿ bcwd.hostels@karnataka.gov.in ಗೆ ಇಮೇಲ್ ಮುಖಾಂತರ ಹಾಗೂ ಜಿಲ್ಲಾ ಅಥವಾ ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ದೂ.ಸಂಖ್ಯೆ 080-8050370006 ಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.