ಕೋಲಾರ: ಹಾಸ್ಟೆಲ್ ನಲ್ಲಿ ಮಧ್ಯಾಹ್ನ ಊಟ ಮಾಡಿದ್ದ 9 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಕೋಲಾರದ ಮೌಲಾನ ಆಜಾದ್ ವಸತಿ ನಿಲಯದಲ್ಲಿ ನಡೆದಿದೆ.
ಚಿತ್ರಾನ್ನ ಸೇವಿಸಿದ್ದ 10ನೇ ತರಗತಿಯ 9 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಊಟ ಸೇವಿಸಿದ ನಂತರ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.