ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್ ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೋಲಾರ ಮೂಲದ ಸಂಜಯ್ ಭುವನ್(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ಮಾರ್ಚ್ 12ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿ ಆತ್ಮಹತ್ಯೆ ಸುದ್ದಿ ತಿಳಿದ ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದ್ದು, ಬಿಗುವಿನ ಪರಿಸ್ಥಿತಿ ಉಂಟಾಗಿದೆ. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ನಡೆಸಿದ್ದಾರೆ. ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.