alex Certify BIG NEWS: ಹಾಸ್ಟೆಲ್ ನಲ್ಲಿ ಬಾಂಬ್ ಸ್ಫೋಟ; ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಸ್ಟೆಲ್ ನಲ್ಲಿ ಬಾಂಬ್ ಸ್ಫೋಟ; ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ

ಅಲಹಾಬಾದ್: ಹಾಸ್ಟೇಲ್ ಕೊಠಡಿಯೊಂದರಲ್ಲಿ ಬಾಂಬ್ ಸ್ಫೋಟಗೊಂಡು ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಲಹಾಬಾದ್ ನಲ್ಲಿ ನಡೆದಿದೆ.

ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೇಲ್ ನಲ್ಲಿ ಈ ಅವಘಡ ಸಂಭವಿಸಿದೆ. ವಿದ್ಯಾರ್ಥಿ ಹಾಸ್ಟೇಲ್ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದ ಎನ್ನಲಾಗಿದೆ.

ಸ್ಫೋಟಕ ವಿದ್ಯಾರ್ಥಿಯ ಕೈಯಲ್ಲಿದ್ದಾಗಲೇ ಸ್ಫೋಟಗೊಂಡಿದೆ. ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಭಾತ್ ಯಾದವ್ ಗಾಯಾಳು ವಿದ್ಯಾರ್ಥಿ.

ಈತ ಬಾಂಬ್ ನ್ನು ಯಾಕೆ ತಯಾರಿಸುತ್ತಿದ್ದ ಎಂಬುದು ತಿಳಿದುಬಂದಿಲ್ಲ. ಘಟನೆಯಲ್ಲಿ ಇನ್ನೋರ್ವ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿದ್ಯಾರ್ಥಿ ಪ್ರಭಾತ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಯಾದವ್ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...