alex Certify ರಾಜ್ಯದಲ್ಲಿ ಇಂದಿನಿಂದ ಬಿಸಿ ಗಾಳಿ: 17 ಜಿಲ್ಲೆಗಳಿಗೆ ‘ಶಾಖಾಘಾತ’ದ ಮುನ್ಸೂಚನೆ: ‘ಆರೆಂಜ್ ಅಲರ್ಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇಂದಿನಿಂದ ಬಿಸಿ ಗಾಳಿ: 17 ಜಿಲ್ಲೆಗಳಿಗೆ ‘ಶಾಖಾಘಾತ’ದ ಮುನ್ಸೂಚನೆ: ‘ಆರೆಂಜ್ ಅಲರ್ಟ್’

ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರದಿಂದ ನಾಲ್ಕು ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ವತಿಯಿಂದ 17 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ವಿಜಯಪುರ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಗದಗ, ಬೆಳಗಾವಿ, ಬಾಗಲಕೋಟೆ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ಹಾವೇರಿ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮುಂದಿನ ಒಂದು ವಾರ ರಾಜ್ಯದಾದ್ಯಂತ ಒಣಹವೆ ಮುಂದುವರೆಯಲಿದ್ದು, ಮುಂದಿನ ಐದು ದಿನಗಳಲ್ಲಿ ಗರಿಷ್ಠ ತಾಪಮಾನ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮೇ 2ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣ ಇರುವ ಸಂಭವವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...