ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಒಂದು ಗಂಟೆವರೆಗೂ ಹೋಟೆಲ್ ಲಭ್ಯವಿರುತ್ತವೆ. ಕೊರೊನಾ ಸಂದರ್ಭದಲ್ಲಿ ವಿಧಿಸಿದ್ದ ನಿರ್ಬಂಧ ತೆರೆವುಗೊಳಿಸಲಾಗಿದೆ.
ಹೋಟೆಲ್ ಮಾಲೀಕರ ಮನವಿ ಮೇರೆಗೆ ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ ರೆಡ್ಡಿ ಅವರು ತಡರಾತ್ರಿ ಒಂದು ಗಂಟೆಯವರೆಗೆ ವಹಿವಾಟು ನಡೆಸಲು ಅನುಮತಿ ನೀಡಿದ್ದಾರೆ.
ಈ ಕುರಿತಾಗಿ ಸುತ್ತೋಲೆ ಹೊರಡಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಬೆಳಗ್ಗೆ 6 ರಿಂದ ತಡರಾತ್ರಿ 1 ಗಂಟೆಯವರೆಗೆ ತಿಂಡಿ ತಿನಿಸುಗಳನ್ನು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ವಿಸ್ತರಿಸಿ ಅನುಮತಿ ನೀಡಲಾಗಿದೆ.