ಬೆಂಗಳೂರು: ವಾಣಿಜ್ಯ ಬಳಕೆ ಸಿಲಿಂಡರ್ ದರ 2000 ರೂ. ಗಡಿ ದಾಟಿದ್ದು, ಅಗತ್ಯ ವಸ್ತುಗಳ ಬೆಲೆ ಕೂಡ ಗಗನಕ್ಕೇರಿದೆ. ಇದರಿಂದಾಗಿ ಹೋಟೆಲ್ ಗಳಲ್ಲಿ ಊಟ-ತಿಂಡಿ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಲಾಕ್ಡೌನ್ ನಿಂದಾಗಿ ಮೊದಲೇ ಸಂಕಷ್ಟದಲ್ಲಿದ್ದ ಹೋಟೆಲ್ ಉದ್ಯಮಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಅಗತ್ಯ ವಸ್ತುಗಳು ಮತ್ತು ಸಿಲಿಂಡರ್ ದರ ಏರಿಕೆಯಾಗಿರುವುದು ಹೊರೆಯಾಗಿ ಪರಿಣಮಿಸಿದೆ. ಹೋಟೆಲ್ ಮಾಲೀಕರ ಸಂಘದಿಂದ ಬೆಲೆ ಇಳಿಕೆಗೆ ಸರ್ಕಾರಕ್ಕೆ ಮನವಿ ಮಾಡಲಿದ್ದು, ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳದಿದ್ದರೆ ಹೋಟೆಲ್ ಗಳಲ್ಲಿ ಊಟ, ತಿಂಡಿಗಳ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಹೇಳಲಾಗಿದೆ.
ಗ್ರಾಹಕರ ಸಂಖ್ಯೆಯಲ್ಲಿ ಇಳಿಮುಖವಾಗಿರುವುದರಿಂದ ಹೋಟೆಲ್ ಉದ್ಯಮಕ್ಕೆ ನಷ್ಟದಲ್ಲಿದೆ. ದಿನಸಿ, ತರಕಾರಿ, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಹೀಗಾಗಿ ತಿಂಡಿ, ಊಟದ ದರ ಏರಿಕೆಯಾಗಲಿದೆ ಎನ್ನಲಾಗಿದೆ.