ಮೈಸೂರು: ಹೋಟೆಲ್ ನಲ್ಲಿ ತಂಗಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಹುಣಸೂರು ರಸ್ತೆಯ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆಕೆಯ ಜೊತೆಗಿದ್ದ ವ್ಯಕ್ತಿಯೇ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟೆ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.