ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಒಂಟಿ ಮನೆ ಯೋಜನೆಗೆ ಮತ್ತೆ ಚಾಲನೆ ನೀಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂಟಿ ಮನೆ ಯೋಜನೆಯನ್ನು ಮತ್ತೆ ಆರಂಭಿಸಲಾಗುತ್ತಿದೆ ಎಂದು ವಿಶೇಷ ಆಯುಕ್ತ ಡಾ. ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.
2000 ಜನರಿಗೆ ತಲಾ 5 ಲಕ್ಷ ರೂಪಾಯಿಯಂತೆ ಧನಸಹಾಯ ನೀಡಲಾಗುತ್ತದೆ. ಶೀಘ್ರವೇ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ಯೋಜನೆಗಾಗಿ 100 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
20*30 ನಿವೇಶನ ಹೊಂದಿದವರು ಸಹಾಯಧನಕ್ಕೆ ಅರ್ಜಿ ಸಲ್ಲಿಸಿದಲ್ಲಿ ಪರಿಶೀಲನೆ ನಡೆಸಿ ಸಹಾಯಧನ ನೀಡಲಾಗುವುದು. ಅರ್ಜಿ ವಿಲೇವಾರಿಯಾದ ನಂತರ ಫಲಾನುಭವಿಗಳಿಗೆ ಚೆಕ್ ವಿತರಿಸಲಾಗುವುದು ಎಂದರು.