
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಫಲಾನುಭವಿಗಳಿಗೆ 2021-22 ನೇ ಸಾಲಿಗೆ ‘ವಾಜಪೇಯಿ ನಗರ ಯೋಜನೆ’ಯಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ಸಾಮಾನ್ಯ ವರ್ಗದವರಿಗೆ ಹಾಗೂ ಡಾ.ಅಂಬೇಡ್ಕರ್ ನಗರ ವಸತಿ ಯೋಜನೆ’ಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮನೆ ನಿರ್ಮಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆದ್ದರಿಂದ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವವರು, ಖಾಲಿ ನಿವೇಶನ ಹಾಗೂ ಹಳೆಯ ಮನೆ ಹೊಂದಿರುವ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ ಇನ್ನಿತರ ಅಗತ್ಯ ದಾಖಲೆ ಪತ್ರ ಇರುವ ಫಲಾನುಭವಿಗಳು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ.
ಅರ್ಹ ಫಲಾನುಭವಿಗಳು ಜೂನ್, 14 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯ ಕೆಲಸದ ವೇಳೆಯಲ್ಲಿ ವಸತಿ ಶಾಖೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸುವಂತೆ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.