alex Certify ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಮನೆ ಹಂಚಿಕೆಗೆ ನಿವೇಶನ ರಹಿತರಿಂದ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಮನೆ ಹಂಚಿಕೆಗೆ ನಿವೇಶನ ರಹಿತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19.23 ಎಕರೆ ಜಮೀನಿನಲ್ಲಿ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನ ರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು ಶಿವಮೊಗ್ಗ ನಗರ ಪ್ರದೇಶದಲ್ಲಿ ವಾಸವಾಗಿದ್ದು, ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರಬೇಕು. ಅರ್ಜಿದಾರರು ಅಥವಾ ಅವರ ಕುಟುಂಬದವರು ಸ್ವಂತ ನಿವೇಶನ/ಮನೆಯನ್ನು ಹೊಂದಿರಬಾರದು. ಅರ್ಜಿಯನ್ನು ಮಹಿಳಾ ಫಲಾನುಭವಿಯ ಹೆಸರಿನಲ್ಲಿಯೇ ಸಲ್ಲಿಸುವುದು, ಪುರುಷ ಅಭ್ಯರ್ಥಿಯಾಗಿದ್ದಲ್ಲಿ ಮಾಜಿ ಸೈನಿಕ, ವಿಕಲಚೇತನ, ಸ್ವಾತಂತ್ರ್ಯ ಯೋಧ, ವಿಧುರ ಹಾಗೂ ಹಿರಿಯ ನಾಗರೀಕರಾಗಿರಬೇಕು. ಬೇರೆ ಯಾವುದೇ ಯೋಜನೆಯಡಿಯಲ್ಲಿ ನಿವೇಶನ/ವಸತಿ ಸೌಲಭ್ಯವನ್ನು ಪಡೆದಿರಬಾರದು ಹಾಗೂ ಈ ಹಿಂದೆ ಯಾವುದಾದರೂ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ವಿವರ ನೀಡುವುದು. ವಾರ್ಷಿಕ 86,700 ರೂ. ಗಳಿಂದ ಆದಾಯ ಹೊಂದಿರಬೇಕು. ತೃತೀಯ ಲಿಂಗಿಗಳೂ ಸಹ ಅರ್ಜಿ ಸಲ್ಲಿಸಬಹುದು.

ಆಸಕ್ತರು ಪಾಲಿಕೆ ವೆಬ್‍ಸೈಟ್ shivamoggacitycorp.org ರ ‘ಆಶ್ರಯ ಯೋಜನೆ ಅಪ್ಲಿಕೇಷನ್’ ಮೆನುವಿನಲ್ಲಿ ಸೆಪ್ಟಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸುವುದು. ಅಕ್ಟೋಬರ್ 7 ರೊಳಗಾಗಿ ಬ್ಯಾಂಕ್ ಮೂಲಕ ನಿಗದಿತ ಶುಲ್ಕವನ್ನು ಪಾವತಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಹೆಚ್ಚಿನ ಸಲಹೆ/ಮಾಹಿತಿಗಾಗಿ ದೂ.ಸಂ.:08182-220799 ಹಾಗೂ ತಾಂತ್ರಿಕ ಸಲಹೆಗಾಗಿ ದೂ.ಸಂ.: 08182-268544/268545 ಗಳನ್ನು ಸಂಪರ್ಕಿಸುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...