ಬೆಂಗಳೂರು: ಮರಳು ನೀತಿ ಗೊಂದಲ ನಿವಾರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಮಾಹಿತಿ ನೀಡಲಾಗಿದೆ.
ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಯೋಗ್ಯ ದರದಲ್ಲಿ ಮರಳನ್ನು ಒದಗಿಸುವ ಉದ್ದೇಶದಿಂದ ಮರಳು ನೀತಿ ಅನುಷ್ಠಾನದಲ್ಲಿರುವ ಗೊಂದಲಗಳ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಮತ್ತು ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಬೆಲೆಯಲ್ಲಿ ಮರಳು ಲಭ್ಯವಾಗಿಸಲು ಹೊಸ ಮರಳು ನೀತಿ -2020 ಅನ್ನು ಅನುಮೋದಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಸರ್ಕಾರದ ಎಲ್ಲಾ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಮರಳು ನೀತಿ ಜಾರಿಗೊಳಿಸಲಾಗುವುದು. ಗೊಂದಲ ನಿವಾರಿಸಿ ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಯೋಗ್ಯ ದರದಲ್ಲಿ ಮರಳನ್ನು ಒದಗಿಸಲಾಗುವುದು ಎಂದು ಹೇಳಲಾಗಿದೆ.