alex Certify ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಭರ್ಜರಿ ಸಿಹಿ ಸುದ್ದಿ: ಮನೆ ಖರೀದಿ ಮೊತ್ತ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಭರ್ಜರಿ ಸಿಹಿ ಸುದ್ದಿ: ಮನೆ ಖರೀದಿ ಮೊತ್ತ ಭಾರಿ ಇಳಿಕೆ

ಬೆಂಗಳೂರು: ರಾಜ್ಯ ಸರ್ಕಾರ ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ ನೀಡಿದ್ದು, ಮನೆ ಖರೀದಿ ಹೊರೆ ಇಳಿಕೆ ಮಾಡಿದೆ.

ಮುಖ್ಯಮಂತ್ರಿಗಳ ಒಂದು ಲಕ್ಷ ಬಹು ಮಹಡಿ ವಸತಿ ಯೋಜನೆ ಅಡಿಯಲ್ಲಿ ಮನೆ ಖರೀದಿ ಮೊತ್ತವನ್ನು ಮತ್ತಷ್ಟು ಕಡಿಮೆ ಮಾಡಲಾಗಿದೆ. ಸಾಮಾನ್ಯ ವರ್ಗದವರಿಗೆ ಪ್ರತಿ ಮನೆಗೆ 7.9 ಲಕ್ಷ ರೂ. ನಿಗದಿಯಾಗಿದ್ದು ಇದನ್ನು 6.5 ಲಕ್ಷ ರೂಗೆ ಇಳಿಕೆ ಮಾಡಲಾಗಿದೆ.

ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 7.10 ಲಕ್ಷ ರೂ.ನಿಗದಿಯಾಗಿದ್ದು, ಈ ಮೊತ್ತವನ್ನು 6 ಲಕ್ಷ ರೂಪಾಯಿಗೆ ಇಳಿಕೆ ಮಾಡಲಾಗಿದೆ. ಸರ್ಕಾರದಿಂದಲೇ ಮೂಲ ಸೌಕರ್ಯ ಬಾಬ್ತು 2.09 ಲಕ್ಷ ರೂ. ಭರಿಸಲಾಗುವುದು. ಹೀಗೆ ಮುಖ್ಯಮಂತ್ರಿಗಳ ಒಂದು ಲಕ್ಷ ಬಹು ಮಹಡಿ ವಸತಿ ಯೋಜನೆ ಅಡಿಯಲ್ಲಿ ಮನೆ ಖರೀದಿ ಮೊತ್ತವನ್ನು ಸರ್ಕಾರ ಮತ್ತಷ್ಟು ಇಳಿಕೆ ಮಾಡಿ ಹೊರೆ ಕಡಿಮೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...