ಬೆಂಗಳೂರು: ಈ ವರ್ಷ 6 ಲಕ್ಷ ಮನೆ ವಿತರಣೆ ಗುರಿ ಹೊಂದಲಾಗಿದೆ. 2024 -25 ನೇ ಸಾಲಿನಲ್ಲಿ ಹೊಸದಾಗಿ ಮೂರು ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯೊಂದಿಗೆ ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಮೂರು ಲಕ್ಷ ಮನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು.
ರಾಜ್ಯದಲ್ಲಿ ವಸತಿ ರಹಿತರ ಸಂಖ್ಯೆ ಗುರುತಿಸಲು ಸಮೀಕ್ಷೆ ನಡೆಸಲಾಗುತ್ತದೆ. ಕೊಳಗೇರಿ ಅಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 1,18,359 ಮನೆಗಳನ್ನು ನಿರ್ಮಿಸಲಾಗುವುದು. ಈ ಮನೆಗಳ ಫಲಾನುಭವಿಗಳು ಪಾವತಿಸಬೇಕಾದ ವಂತಿಕೆಯನ್ನು ಒಂದು ಲಕ್ಷ ರೂ.ಗೆ ಸೀಮಿತಗೊಳಿಸಿ ಹೆಚ್ಚುವರಿ ಆರು ಲಕ್ಷ ರೂ.ಗಳನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.