ಬೆಂಗಳೂರು: ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಸಂಪುಟ ಸಭೆ ನಂತರ ಸಚಿವ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾಹಿತಿ ನೀಡಿ, ಗ್ರಾಮೀಣ ಪ್ರದೇಶದಲ್ಲಿ ನಾಲ್ಕು ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು. ನಗರ ಪ್ರದೇಶದಲ್ಲಿ ಒಂದು ಲಕ್ಷ ಮನೆಗಳ ನಿರ್ಮಾಣಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.
ಸುಮಾರು 8 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲಿದ್ದು, ಪ್ರತಿಯೊಂದು ಗ್ರಾಮ ಪಂಚಾಯಿತಿಗಳ ಮೂಲಕ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ನಗರದಲ್ಲಿ ಆಸರೆ ಸಮಿತಿಯ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಎರಡು ವರ್ಷದಲ್ಲಿ ಐದು ಲಕ್ಷ ಮನೆಗಳ ನಿರ್ಮಾಣಕ್ಕೆ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಿಯೇ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.