alex Certify BREAKING: ಮನೆ ಹೊಂದುವ ಕನಸು ಕಂಡ ಗ್ರಾಮೀಣ, ನಗರದ ಜನತೆಗೆ ಭರ್ಜರಿ ಸಿಹಿ ಸುದ್ದಿ: 5 ಲಕ್ಷ ಮನೆಗಳ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮನೆ ಹೊಂದುವ ಕನಸು ಕಂಡ ಗ್ರಾಮೀಣ, ನಗರದ ಜನತೆಗೆ ಭರ್ಜರಿ ಸಿಹಿ ಸುದ್ದಿ: 5 ಲಕ್ಷ ಮನೆಗಳ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು: ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ಸಂಪುಟ ಸಭೆ ನಂತರ ಸಚಿವ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾಹಿತಿ ನೀಡಿ, ಗ್ರಾಮೀಣ ಪ್ರದೇಶದಲ್ಲಿ ನಾಲ್ಕು ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು. ನಗರ ಪ್ರದೇಶದಲ್ಲಿ ಒಂದು ಲಕ್ಷ ಮನೆಗಳ ನಿರ್ಮಾಣಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.

ಸುಮಾರು 8 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲಿದ್ದು, ಪ್ರತಿಯೊಂದು ಗ್ರಾಮ ಪಂಚಾಯಿತಿಗಳ ಮೂಲಕ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ನಗರದಲ್ಲಿ ಆಸರೆ ಸಮಿತಿಯ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಎರಡು ವರ್ಷದಲ್ಲಿ ಐದು ಲಕ್ಷ ಮನೆಗಳ ನಿರ್ಮಾಣಕ್ಕೆ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಿಯೇ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...