
ಹಾವೇರಿ: ರಾಜ್ಯದಲ್ಲಿ ಭಾರಿ ಮಳೆ, ನೆರೆ ಹಾನಿಯಿಂದ ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಬಿದ್ದ ಮನೆಗಳ ಪುನರ್ ನಿರ್ಮಾಣಕ್ಕೆ ಕೂಡ ಪರಿಹಾರ ನೀಡಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನದಿಗಳ ಪ್ರವಾಹದಿಂದಾಗಿ ಮನೆಗಳು ಕುಸಿದು ಬಿದ್ದಿವೆ. ಹಲವೆಡೆ ಜಮೀನುಗಳಿಗೆ ನೀರು ನುಗ್ಗಿ ಕೆರೆ, ರಸ್ತೆ, ಸೇತುವೆಗಳಿಗೆ ಹಾನಿಯಾಗಿದ್ದು, ದುರಸ್ತಿ ಕಾಮಗಾರಿಗೆ ಹಣ ನೀಡಲಾಗುವುದು ಎಂದು ಶ್ಯಾಬಳ ಗ್ರಾಮದಲ್ಲಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.