alex Certify ಶುಭ ಸುದ್ದಿ: ಬಡವರು, ಮಧ್ಯಮ ವರ್ಗದವರಿಗೆ ಸ್ವಂತ ಮನೆಯ ಕನಸು ನನಸು ಮಾಡಲು ಹೊಸ ಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಬಡವರು, ಮಧ್ಯಮ ವರ್ಗದವರಿಗೆ ಸ್ವಂತ ಮನೆಯ ಕನಸು ನನಸು ಮಾಡಲು ಹೊಸ ಯೋಜನೆ

ನವದೆಹಲಿ: ಬಡವರು, ಮಧ್ಯಮ ವರ್ಗದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರ ನೆರವು ನೀಡಲಿದೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಸದ್ಯದಲ್ಲೇ ಹೊಸ ಯೋಜನೆ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ,

ಮಧ್ಯಮ ವರ್ಗದವರಿಗೆ ಸ್ವಂತ ಮನೆಯ ಕನಸು ನನಸು ಮಾಡಲು ಶೀಘ್ರದಲ್ಲೇ ಹೊಸ ಯೋಜನೆ ಘೋಷಿಸಲಾಗುವುದು. ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಗ್ರಾಮೀಣ ಪ್ರದೇಶದ ಬಡವರಿಗೆ ಇನ್ನು ಎರಡು ಕೋಟಿ ಮನೆಗಳನ್ನು ನಿರ್ಮಾಣ ಮಾಡಲು ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿಯೊಬ್ಬರಿಗೂ ಮನೆ, ನೀರು, ವಿದ್ಯುತ್, ಅಡುಗೆ ಅನಿಲ, ಬ್ಯಾಂಕ್ ಖಾತೆ ನೀಡುವ ಮೂಲಕ ಎಲ್ಲರನ್ನು ಒಳಗೊಂಡ ಸಮಗ್ರ ಅಭಿವೃದ್ಧಿ ಸಾಧಿಸಲು ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರ ಶ್ರಮಿಸಿದ್ದು, ಬಾಡಿಗೆ ಮನೆಯಲ್ಲಿ, ಕೊಳಗೇರಿ ಪ್ರದೇಶಗಳಲ್ಲಿ, ಅಕ್ರಮ ಒತ್ತುವರಿ ಜಾಗದಲ್ಲಿ ವಾಸಿಸುತ್ತಿರುವವರಿಗೆ ಸ್ವಂತ ಮನೆ ಖರೀದಿಸಲು ಅಥವಾ ಕಟ್ಟಿಕೊಳ್ಳಲು ಸರ್ಕಾರ ನೆರವು ನೀಡಲಿದ್ದು, ಇದಕ್ಕಾಗಿ ಶೀಘ್ರದಲ್ಲೇ ಹೊಸ ಯೋಜನೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...