ಬೆಂಗಳೂರು: ವಸತಿರಹಿತರಿಗೆ 5.87 ಲಕ್ಷ ಮನೆ ಮಂಜೂರು ಮಾಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರ ಪರವಾಗಿ ಕೇಶವ ಪ್ರಸಾದ್ ಕೇಳಿದ ಪ್ರಶ್ನೆಗೆ ವಸತಿ ಸಚಿವರ ಪರವಾಗಿ ಉತ್ತರ ನೀಡಿದ ಸಚಿವ ರಾಮಲಿಂಗಾರೆಡ್ಡಿ ಅವರು, ರಾಜ್ಯದಲ್ಲಿ ವಸತಿರಹಿತರಿಗೆ 1.70ಲಕ್ಷ ಮನೆ ನಿರ್ಮಾಣಪೂರ್ಣಗೊಂಡಿದೆ. 5.87 ಲಕ್ಷ ಮನೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರತಿವರ್ಷ ಮೂರು ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರತಿ ವರ್ಷ ಮೂರು ಲಕ್ಷದಂತೆ 15 ಲಕ್ಷ ಮನೆ ನಿರ್ಮಾಣ ಮಾಡಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.