ಕೋಲಾರ : ಮನೆಯ ಮೇಲ್ಛಾವಣಿ ಕುಸಿದು ದುರಂತ ಸಂಭವಿಸಿದ್ದು, ಏಳು ಮಂದಿಗೆ ಗಂಭೀರ ಗಾಯಗಳಾದ ಘಟನೆ ಮುಳಬಾಗಿಲು ತಾಲೂಕಿನ ಸುಂಪಕುಂಟೆಯಲ್ಲಿ ನಡೆದಿದೆ.
ಶ್ರೀನಿವಾಸ್ ಎಂಬುವವರ ಕುಟುಂಬ ಮನೆಯಲ್ಲಿ ತಡರಾತ್ರಿ ಮಲಗಿದ್ದಾಗ ಮನೆಯ ಮೇಲ್ಛಾವಣಿ ಕುಸಿದಿದೆ ಎಂದು ತಿಳಿದು ಬಂದಿದೆ. ಪರಿಣಾಮ ಏಳು ಮಂದಿ ಪೈಕಿ ಓರ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ನಂಗಲಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೆಯ ಮನೆಯಾಗಿದ್ದರಿಂದ ಶಿಥಿಲಗೊಂಡ ಮನೆಯ ಮೇಲ್ಛಾವಣಿ ಕುಸಿದಿದೆ ಎನ್ನಲಾಗಿದೆ. ಅದೃಷ್ಟವಶಾತ್ ದೊಡ್ಡ ದುರಂತ ತಪ್ಪಿದೆ.