ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸುತ್ತಿದ್ದು, ಶೀಘ್ರದಲ್ಲಿಯೇ ಯೋಜನೆ ಜಾರಿಗೊಳಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಕಚೇರಿಯನ್ನು ಜಿಲ್ಲಾಮಟ್ಟದಲ್ಲಿ ತೆರೆಯಲು ನಿರ್ಧರಿಸಿದ್ದು, ಆರು ತಿಂಗಳಲ್ಲಿ ಕಚೇರಿಗಳು ಕಾರ್ಯಾರಂಭ ಮಾಡಲಿವೆ ಎಂದು ಹೇಳಿದ್ದಾರೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರ ಕಾರ್ಡ್ ಪಡೆದವರಲ್ಲಿ ಶೇಕಡ 50ಕ್ಕೂ ಹೆಚ್ಚು ಮಂದಿ ಅನರ್ಹರು ಇರುವ ಬಗ್ಗೆ ಅನುಮಾನವಿದ್ದು, ಅಂತಹ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು ಎಂದು ತಿಳಿಸಿದ್ದಾರೆ.