alex Certify ಮನೆ ಹೊಂದುವ ಕನಸು ಕಂಡ ಗ್ರಾಮೀಣ ಜನರಿಗೆ ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಹೊಂದುವ ಕನಸು ಕಂಡ ಗ್ರಾಮೀಣ ಜನರಿಗೆ ಖುಷಿ ಸುದ್ದಿ

ಬೆಂಗಳೂರು: ಪ್ರತಿ ಗ್ರಾಮ ಪಂಚಾಯಿತಿಗೆ 100 ಮನೆಗಳಂತೆ ರಾಜ್ಯದಲ್ಲಿ ಹೊಸದಾಗಿ 6 ಲಕ್ಷ ಮನೆಗಳ ನಿರ್ಮಾಣ ಮಾಡಲಾಗುವುದು.

6 ಲಕ್ಷ ಮನೆಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿದ್ದು, ಸಿಎಂ ಅನುಮೋದನೆಯೊಂದಿಗೆ ಯೋಜನೆಯನ್ನು ಆರಂಭಿಸಲಾಗುತ್ತದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಬೆಂಗಳೂರಿನಲ್ಲಿನ ಬಡವರಿಗಾಗಿ ಮುಖ್ಯಮಂತ್ರಿ ವಸತಿ ಯೋಜನೆಯಡಿ ಒಂದು ಲಕ್ಷ ಮನೆಗಳ ನಿರ್ಮಾಣ ಮಾಡಲಾಗುತ್ತಿದ್ದು, ಆಗಸ್ಟ್ 15 ರಂದು 5 ಸಾವಿರ ಮನೆಗಳನ್ನು ಮುಖ್ಯಮಂತ್ರಿಗಳು ಹಂಚಿಕೆ ಮಾಡಲಿದ್ದಾರೆ.

ವಸತಿ ಯೋಜನೆಯಡಿ ಸಾಮಾನ್ಯ ವರ್ಗದ ಬಡವರಿಗೆ 1.20 ಲಕ್ಷ ರೂಪಾಯಿ ಮತ್ತು ಪರಿಶಿಷ್ಟ ವರ್ಗದವರಿಗೆ 1.50 ಲಕ್ಷ ರೂಪಾಯಿ ನೆರವು ನೀಡಲಾಗುತ್ತದೆ. ಅರ್ಹರಿಗೆ ಯೋಜನೆಯನ್ನು ತಲುಪಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...