ಮಂಗಳೂರು: ಮಾರ್ಚ್ ಒಳಗೆ 16 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಸುಬ್ರಹ್ಮಣ್ಯದಲ್ಲಿ ಮಾತನಾಡಿದ ಅವರು, ಮುಂದಿನ ಮಾರ್ಚ್ ತಿಂಗಳೊಳಗೆ 16 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ನೀಡಲಾಗುವುದು. ಪ್ರಧಾನ ಮಂತ್ರಿಗಳ ಆಶಯದಂತೆ ರಾಜ್ಯದಲ್ಲಿ ವಸತಿ ವ್ಯವಸ್ಥೆಗೆ ಒಂದೇ ವಿಷನ್ ಜಾರಿಗೆ ತರಲಾಗಿದ್ದು, ಇಂದಿನ ಸರ್ಕಾರದ ಲೋಪ ಸರಿಪಡಿಸಿ ರಾಜ್ಯಕ್ಕೆ ಒಂದೇ ಸಾಫ್ಟ್ವೇರ್ ಅಭಿವೃದ್ಧಿ ಪಡಿಸಲಾಗಿದೆ ಎಂದರು.
ಅರ್ಹ ಬಡವರ ಖಾತೆಗೆ ನೇರವಾಗಿ ಹಣ ಸಂದಾಯ ಮಾಡುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. 6 ಲಕ್ಷ ಮನೆಗಳು ಸೇರಿದಂತೆ ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿದ 10 ಲಕ್ಷ ಮನೆಗಳು ನಿರ್ಮಾಣಗೊಳ್ಳಲಿದ್ದು, ಈಗಾಗಲೇ ಆರು ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮಾರ್ಚ್ ನೊಳಗೆ ಎಲ್ಲಾ 16 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದರು.