ಬೆಂಗಳೂರು: ವಸತಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ವಸತಿ ಯೋಜನೆ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ ಮಾಡಲಾಗುವುದು.
ಕೇಂದ್ರದ ಸೂಚನೆಯಂತೆ ವಸತಿ ಯೋಜನೆ ಫಲಾನುಭವಿಗಳ ಆದಾಯಮಿತಿ ಪರಿಷ್ಕರಿಸಲಾಗುತ್ತಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ. ವಸತಿ ಸಚಿವ ವಿ. ಸೋಮಣ್ಣ ಅವರು ಶೀಘ್ರವೇ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.
ವಸತಿ ಯೋಜನೆಗಳ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಬಜೆಟ್ ಮೇಲಿನ ಉತ್ತರದ ವೇಳೆ ಪ್ರಕಟಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಗ್ರಾಮೀಣ ಪ್ರದೇಶದ ವಸತಿ ಫಲಾನುಭವಿಗಳ ಆದಾಯ ಮಿತಿಯನ್ನು 32,000 ರೂ.ನಿಂದ 1.20 ಲಕ್ಷ ರೂ.ಗೆ ಏರಿಕೆ ಮಾಡಲಾಗುತ್ತದೆ. ನಗರ ವಸತಿ ಯೋಜನೆ ಫಲಾನುಭವಿಗಳ ಆದಾಯ ಮಿತಿಯನ್ನು 87,600 ರೂ.ನಿಂದ 3.20 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗುವುದು. ಆದಾಯ ಮಿತಿ ಹೆಚ್ಚಳ ಮಾಡುವುದರಿಂದ ಹೆಚ್ಚಿನ ಜನರಿಗೆ ಪ್ರಯೋಜನ ಸಿಗಲಿದೆ ಎನ್ನಲಾಗಿದೆ.