ಬೆಂಗಳೂರು: ರಾಜ್ಯದಲ್ಲಿ ಎಲ್ಲರಿಗೂ ಸೂರು ನೀಡುವ ಉದ್ದೇಶದೊಂದಿಗೆ ಶರವೇಗದಲ್ಲಿ ವಸತಿ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ವಿಭಿನ್ನವಾಗಿ ಯೋಜನೆ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ನಗರಪ್ರದೇಶಗಳಿಗೆ 8.42 ಲಕ್ಷ ಮನೆಗಳು ಕೇಂದ್ರ ಸರ್ಕಾರದಿಂದ ಮಂಜೂರಾಗಿದೆ ಎಂದು ಹೇಳಿದ್ದಾರೆ.
ಮನೆ ನಿರ್ಮಿಸಲು ಸಬ್ಸಿಡಿ ನೀಡಲಾಗುತ್ತಿದೆ. ಸಾಲ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ. ನಗರ ಪ್ರದೇಶ, ಕೊಳಚೆ ಪ್ರದೇಶಗಳಲ್ಲಿ 2.62 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. ಎಲ್ಲಾ ನಗರಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ವಿಸ್ತರಿಸಲಾಗಿದೆ. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 3.37 ಲಕ್ಷ ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 2500 ಎಕರೆಗೂ ಹೆಚ್ಚು ಸರ್ಕಾರಿ ಜಾಗ ಗುರುತಿಸಿ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದ್ದಾರೆ.