ಮೈಸೂರು: ರಾಜ್ಯದಲ್ಲಿ ವಸತಿ ರಹಿತರಿಗಾಗಿ ವಿವಿಧ ವಸತಿ ಯೋಜನೆಗಳಡಿ ವರ್ಷದೊಳಗೆ 2.23 ಲಕ್ಷ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಮೈಸೂರಿನಲ್ಲಿ ಗುರುವಾರ ನಡೆದ ಕೃಷ್ಣರಾಜ ಮತ್ತು ವರುಣ ಕ್ಷೇತ್ರದ ವಸತಿ ರಹಿತ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ(ನಗರ) ಅಡಿ ಗುಂಪು ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 1.8 ಲಕ್ಷ ಮನೆ ನಿರ್ಮಿಸಲಿದ್ದು, ರಾಜೀವ್ ಗಾಂಧಿ ವಸತಿ ನಿಗಮದಿಂದ 53,000 ಮನೆ ನಿರ್ಮಿಸುವ ಗುರಿ ಹೊಂದಲಾಗಿದೆ. ಈಗಾಗಲೇ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 36,000 ಮನೆ ನಿರ್ಮಾಣ ಮಾಡಿ ಫಲಾನುಭವಿಗಳಿಗೆ ವಿತರಿಸಲಾಗಿದೆ. ಲೋಕಸಭೆ ಚುನಾವಣೆಯ ನಂತರ ಮತ್ತೆ 48,000 ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.