ಬೆಂಗಳೂರು: ಶಿವಮೊಗ್ಗದ ಗೋವಿಂದಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ನಿರ್ಮಾಣ ಮಾಡಿರುವ 652 ಆಶ್ರಯ ಮನೆಗಳ ಹಂಚಿಕೆಗೆ ದಿನಾಂಕ ನಿಗದಿಪಡಿಸಲಾಗಿದೆ.
ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಕಾಂಗ್ರೆಸ್ ಮುಖಂಡ ಹೆಚ್.ಸಿ. ಯೋಗೇಶ್ ನೇತೃತ್ವದ ನಿಯೋಗ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಮೆಸ್ಕಾಂಗೆ ಪಾವತಿ ಮಾಡಬೇಕಿರುವ 13 ಕೋಟಿ ರೂಪಾಯಿ ಪಾವತಿಸಲು ಒಪ್ಪಿಗೆ ಪಡೆದುಕೊಳ್ಳಲಾಗಿದ್ದು, ಬಳಿಕ ಆಶ್ರಯ ಮನೆಗಳ ಹಂಚಿಕೆಗೆ ದಿನಾಂಕ ನಿಗದಿಪಡಿಸಿ ಸಚಿವರ ಒಪ್ಪಿಗೆ ಪಡೆಯಲಾಗಿದೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗದಲ್ಲಿ ಲಾಟರಿ ಎತ್ತಿ ಫಲಾನುಭವಿಗಳಿಗೆ ಮನೆಗಳ ಹಂಚುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಲಾಗಿದೆ.