alex Certify ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ತಲಾ 5 ಲಕ್ಷ ರೂ. ಸಾಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ತಲಾ 5 ಲಕ್ಷ ರೂ. ಸಾಲ

ಬೆಂಗಳೂರು: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ನೀಡುವ ಕುರಿತಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬ್ಯಾಂಕ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, ಸಭೆ ಫಲಪ್ರದವಾಗಿದೆ.

ಮೊದಲ ಹಂತದಲ್ಲಿ 3000 ಫಲಾನುಭವಿಗಳಿಗೆ ತಲಾ 5 ಲಕ್ಷ ರೂ. ನೀಡಲು ಬ್ಯಾಂಕುಗಳ ಮುಖ್ಯಸ್ಥರು ಸಮ್ಮತಿ ಸೂಚಿಸಿದ್ದಾರೆ. ಮೊದಲ ಹಂತದಲ್ಲಿ ಸಾಲಕ್ಕಾಗಿ 3 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, 316 ಮಂದಿಗೆ ಸಾಲ ಮಂಜೂರಾಗಿದೆ. ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಎಸ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಐಐಎಫ್ಎಲ್ ಬ್ಯಾಂಕ್ ವತಿಯಿಂದ 15.80 ಕೋಟಿ ರೂಪಾಯಿ ಮೊತ್ತದ ಚೆಕ್ ಗಳನ್ನು ಸಚಿವರಿಗೆ ಹಸ್ತಾಂತರ ಮಾಡಲಾಗಿದೆ.

ಒಂದು ಲಕ್ಷ ಮನೆ ಯೋಜನೆ ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಬರಲಿದ್ದು, ಉತ್ತಮ ಮಾರುಕಟ್ಟೆ ಇದೆ. ಹೀಗಾಗಿ ಬ್ಯಾಂಕುಗಳು ಅಡಮಾನ ಇಟ್ಟುಕೊಂಡು ಸಾಲ ನೀಡಬಹುದು. ಹಂತ ಹಂತವಾಗಿ 45,125 ಫಲಾನುಭವಿಗಳಿಗೆ ಸಾಲ ಮಂಜೂರಾದಲ್ಲಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಮನೆಗಳ ಹಂಚಿಕೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...