alex Certify ನಟರಿಗಿಂತಲೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ಲೀಲಾವತಿ ‘ಸಿನಿ ಜರ್ನಿ’ ಶುರುವಾಗಿದ್ದು ಹೇಗೆ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟರಿಗಿಂತಲೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ಲೀಲಾವತಿ ‘ಸಿನಿ ಜರ್ನಿ’ ಶುರುವಾಗಿದ್ದು ಹೇಗೆ..?

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ನಿನ್ನೆ ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಲೀಲಾವತಿ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿದಿದೆ.

ಲೀಲಾವತಿ ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ಅವರು ನಿರ್ವಹಿಸಿದ್ದರು.ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ. ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಇಬ್ಬರಿಗೂ ಕೃಷಿ, ಪರಿಸರ, ಪಶು ಪ್ರಾಣಿಗಳ ಬಗ್ಗೆ ಅಪಾರ ಕಾಳಜಿಯಿತ್ತು.

ಲೀಲಾವತಿ ಅವರು ೧೯೪೯ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.

ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ. ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.70 ರ ದಶಕದ ಬಳಿಕ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪೋಷಕಪಾತ್ರಗಳಲ್ಲಿ ನಟಿಸಿದರು.

ಅವುಗಳಲ್ಲಿ ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ ಮುಂತಾದ ಚಿತ್ರಗಳು ಪ್ರಮುಖವಾದವು.
ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು ೬೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು ೧೯೯೯-೨೦೦೦ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು, ‘ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು ೨೦೦೮ರಲ್ಲಿ ಪಡೆದರು.

ಮದುವೆ ಮಾಡಿ ನೋಡು,ಸಂತ ತುಕಾರಾಂ, ತುಂಬಿದ ಕೊಡ, ಕಣ್ತೆರೆದು ನೋಡು, ರಾಣಿ ಹೊನ್ನಮ್ಮ, ಗೆಜ್ಜೆ ಪೂಜೆ ಸಿಪಾಯಿರಾಮು, ನಾಗರಹಾವು, ಭಕ್ತ ಕುಂಬಾರ, ಬಿಳಿ ಹೆಂಡ್ತಿ, ನಾ ನಿನ್ನ ಮರೆಯಲಾರೆ, ಕಳ್ಳ ಕುಳ್ಳ, , ಡಾಕ್ಟರ್ ಕೃಷ್ಣಕನ್ನಡದ ಕಂದ, ವೀರ ಕೇಸರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಲೀಲಾವತಿ ನಟಿಸಿ ಟಾಪ್ ನಟಿಯಾಗಿ ಮಿಂಚಿದರು. ಬರೀ ಸಿನಿಮಾರಂಗದಲ್ಲಿ ಮಾತ್ರ ಸೀಮಿತವಾಗದೇ ಸಮಾಜ ಸೇವೆಯಲ್ಲೂ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳಲ್ಲಿ ಬಣ್ಣ ಹಚ್ಚಿದ ನಟಿ ಕೆಲಚಿತ್ರಗಳಲ್ಲಿ ನಾಯಕ ನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು. ಕೆಲವು ನಟಿಯರು 500 ರೂ ಪಡೆಯುತ್ತಿದ್ದ ಕಾಲದಲ್ಲಿ ಲೀಲಾವತಿ 50 ಸಾವಿರ ಸಂಭಾವನೆ ಪಡೆಯುತ್ತಿದ್ದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...