alex Certify `ರೇಷನ್ ಕಾರ್ಡ್’ ನಲ್ಲಿ ಹೊಸ ಸದಸ್ಯರ ಹೆಸರು ಸೇರಿಸುವುದು ಹೇಗೆ? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

`ರೇಷನ್ ಕಾರ್ಡ್’ ನಲ್ಲಿ ಹೊಸ ಸದಸ್ಯರ ಹೆಸರು ಸೇರಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಪಡಿತರ ಚೀಟಿಯಲ್ಲಿ ಹೆಸರು ಸೇರಿಸುವುದು ಬಹಳ ಮುಖ್ಯ. ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸುವ ಕೆಲಸವನ್ನು ಕೆಲವೇ ನಿಮಿಷದಲ್ಲಿ ಮಾಡಬಹುದು. ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪಡಿತರ ಚೀಟಿಗೆ ಹೆಸರು ಸೇರಿಸಬಹುದು. ಇದಕ್ಕೆ ಬೇಕಾಗುವ ದಾಖಲೆಗಳ ಮಾಹಿತಿ ಇಲ್ಲಿದೆ.

ಮಗುವಿನ ಹೆಸರು ಸೇರ್ಪಡೆ : ಪಡಿತರ ಚೀಟಿಯಲ್ಲಿ ಮಗುವಿನ ಹೆಸರನ್ನು ಸೇರಿಸಬೇಕಾದರೆ, ಮನೆಯ ಮುಖ್ಯಸ್ಥರ ಪಡಿತರ ಚೀಟಿ, ಮಗುವಿನ ಜನನ ಪ್ರಮಾಣಪತ್ರ ಮತ್ತು ಇಬ್ಬರ ಪೋಷಕರ ಆಧಾರ್ ಕಾರ್ಡ್ ಅಗತ್ಯವಿರುತ್ತದೆ.

ಹೊಸ ಸದಸ್ಯರ ಹೆಸರು ಸೇರ್ಪಡೆ : ಮದುವೆಯಾದ ನಂತ್ರ ಮನೆಗೆ ಬರುವ ಸೊಸೆಯ ಹೆಸರನ್ನು ರೇಷನ್ ಕಾರ್ಡ್ ಗೆ ಸೇರಿಸಬೇಕಾಗುತ್ತದೆ. ಮಹಿಳೆಯ ಆಧಾರ್ ಕಾರ್ಡ್, ಮದುವೆ ಪ್ರಮಾಣಪತ್ರ, ಗಂಡನ ಪಡಿತರ ಚೀಟಿಯ ಫೋಟೋ ಕಾಪಿ ನೀಡಬೇಕು. ಹಾಗೆ ಆಕೆಯ ತಂದೆ ಮನೆಯ ರೇಷನ್ ಕಾರ್ಡ್ ನಲ್ಲಿರುವ ಹೆಸರನ್ನು ತೆಗೆಯಬೇಕು.

ಮೊದಲು ಆಹಾರ ಪೂರೈಕೆ ಅಧಿಕೃತ ವೆಬ್ಸೈಟ್ ಗೆ ಹೋಗಬೇಕು. ಬೇರೆ ಬೇರೆ ರಾಜ್ಯಗಳು ಬೇರೆ ಬೇರೆ ವೆಬ್ಸೈಟ್ ಹೊಂದಿವೆ. ವೆಬ್ಸೈಟ್ ಗೆ ಲಾಗಿನ್ ಆದ ನಂತ್ರ ಐಡಿ ರಚಿಸಬೇಕು. ಈಗಾಗಲೇ ಐಡಿ ರಚಿಸಿದ್ದರೆ ಲಾಗಿನ್ ಆಗಬೇಕು. ಲಾಗಿನ್ ಆದ್ಮೇಲೆ ಹೊಸ ಸದಸ್ಯರ ಆಯ್ಕೆ ಕಾಣಿಸುತ್ತದೆ. ಅದ್ರ ಮೇಲೆ ಕ್ಲಿಕ್ ಮಾಡಬೇಕು.

ಅಲ್ಲಿ  ಹೊಸ ಫಾರ್ಮ್ ಕಾಣಿಸುತ್ತದೆ. ಅಲ್ಲಿ ಕುಟುಂಬಸ್ಥರ ಎಲ್ಲ ಮಾಹಿತಿ ಭರ್ತಿ ಮಾಡಬೇಕು. ಫಾರ್ಮ್ ಜೊತೆಗೆ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಯನ್ನು ಅಪ್‌ಲೋಡ್ ಮಾಡಬೇಕು. ನಂತ್ರ ಶುಲ್ಕ ಪಾವತಿ ಮಾಡಬೇಕಾಗುತ್ತದೆ.

ನಮೂನೆ ಸಲ್ಲಿಕೆಯ ನಂತರ ನೋಂದಣಿ ಸಂಖ್ಯೆಯನ್ನು ನೀಡಲಾಗುತ್ತದೆ. ಫಾರ್ಮ್ ಅನ್ನು ಈ ಪೋರ್ಟಲ್ ನಲ್ಲಿ ಟ್ರ್ಯಾಕ್ ಮಾಡಬಹುದು. ಅಧಿಕಾರಿಗಳು ನಮೂನೆ ಮತ್ತು ದಾಖಲೆಗಳನ್ನು ಪರಿಶೀಲಿಸುತ್ತಾರೆ. ಎಲ್ಲವೂ ಸರಿಯಾಗಿದ್ದರೆ ನಮೂನೆಯನ್ನು ಸ್ವೀಕರಿಸಲಾಗುತ್ತದೆ ಮತ್ತು ಪಡಿತರ ಚೀಟಿಯನ್ನು ಅಂಚೆ ಮೂಲಕ ಮನೆಗೆ ತಲುಪಿಸಲಾಗುತ್ತದೆ.

ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದಾದ್ರೆ ಹತ್ತಿರದ ಆಹಾರ ಪೂರೈಕೆ ಕೇಂದ್ರಕ್ಕೆ ಹೋಗಬೇಕು. ಎಲ್ಲಾ ಅಗತ್ಯ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಬೇಕು. ಹೊಸ ಸದಸ್ಯರ ಹೆಸರನ್ನು ಸೇರಿಸುವ ಅರ್ಜಿ ಭರ್ತಿ ಮಾಡಬೇಕು. ಅರ್ಜಿ ಶುಲ್ಕವನ್ನು ಜಮಾ ಮಾಡಬೇಕು. ನಮೂನೆಯನ್ನು ಸಲ್ಲಿಸಿದ ನಂತರ, ಅಧಿಕಾರಿಗಳು ರಶೀದಿಯನ್ನು ನೀಡುತ್ತಾರೆ. ರಶೀದಿಯ ಮೂಲಕ, ಆನ್ಲೈನ್ ​​ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...