alex Certify BREAKING NEWS: ವಾಹನ ಸವಾರರ ಗಮನಕ್ಕೆ: HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಾಹನ ಸವಾರರ ಗಮನಕ್ಕೆ: HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ

ಬೆಂಗಳೂರು: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಇನ್ನೇನು ಮುಗಿಯಲು ಕೇವಲ ಎರಡು ದಿನ ಮಾತ್ರ ಬಾಕಿ ಇರುವಾಗ ಸರ್ಕಾರ ಗಡುವು ವಿಸ್ತರಣೆ ಮಾಡಿದೆ.

ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಳಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು.

ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...