
ಬೆಂಗಳೂರು: ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನೀಡಲಾಗಿದ್ದ ಗಡುವು ಸೆ. 15ಕ್ಕೆ ಮುಕ್ತಾಯವಾಗಿದ್ದು, HSRP ಅಳವಡಿಸಿದ ವಾಹನಗಳಿಗೆ ದಂಡ ವಿಧಿಸುವ ನಿರ್ಧಾರವನ್ನು ಸದ್ಯಕ್ಕೆ ಸಾರಿಗೆ ಇಲಾಖೆ ಕೈಗೊಂಡಿಲ್ಲ. ನಂಬರ್ ಪ್ಲೇಟ್ ಅಳವಡಿಸಲು ಡಿಸೆಂಬರ್ ವರೆಗೆ ಗಡುವು ವಿಸ್ತರಿಸುವ ಸಾಧ್ಯತೆ ಇದೆ.
HSRP ಅಳವಡಿಸಿದ ವಾಹನಗಳಿಗೆ ಸೆ. 16ರಿಂದ ದಂಡ ವಿಧಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಈ ಸಂಬಂಧ ಸಲ್ಲಿಕೆಯಾದ ಅರ್ಜಿ ವಿಚಾರಣೆ ಸೆ. 18ರಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಹೀಗಾಗಿ ಸದ್ಯಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳು ದಂಡ ವಿಧಿಸುವ ಬಗ್ಗೆ ತೀರ್ಮಾನಿಸಿಲ್ಲ.
ವಿಚಾರಣೆಯ ನಂತರ ದಂಡ ವಿಧಿಸಬೇಕೆ ಅಥವಾ ಗಡುವು ವಿಸ್ತರಿಸಬೇಕೆ ಎನ್ನುವ ನಿರ್ಧಾರ ಕೈಗೊಳ್ಳಲಿದ್ದು, ಬಹುತೇಕ ಡಿಸೆಂಬರ್ ವರೆಗೂ ಗಡುವು ವಿಸ್ತರಿಸುವ ಸಾಧ್ಯತೆ ಇದೆ. ಇಲ್ಲದಿದ್ದಲ್ಲಿ ಹೈಕೋರ್ಟ್ ವಿಚಾರಣೆ ನಂತರ ದಂಡ ವಿಧಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಲಾಗಿದೆ.
2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ಹಳೆಯ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯವಾಗಿದೆ. ರಾಜ್ಯದಲ್ಲಿ ಇನ್ನೂ ಸುಮಾರು 1 ಕೋಟಿ ವಾಹನಗಳಿಗೆ HSRP ಅಳವಡಿಸಿಕೊಳ್ಳಬೇಕಿರುವುದರಿಂದ ಗಡುವು ವಿಸ್ತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.