alex Certify ವಾಹನಗಳಿಗೆ HSRP ಅಳವಡಿಕೆ ಗಡುವು ಸೆ. 15 ರವರೆಗೆ ವಿಸ್ತರಣೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನಗಳಿಗೆ HSRP ಅಳವಡಿಕೆ ಗಡುವು ಸೆ. 15 ರವರೆಗೆ ವಿಸ್ತರಣೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ HSRP ಅಳವಡಿಕೆಗೆ ಸೆಪ್ಟಂಬರ್ 15 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

HSRP ಜಾರಿಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳ ವಿಚಾರಣೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆದಿದೆ.

ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು, HSRP ಅಳವಡಿಸಲು ನಿಗದಿಪಡಿಸಿದ್ದ ಅವಧಿಯನ್ನು ಸೆಪ್ಟಂಬರ್ 15 ರವರೆಗೆ ಸರ್ಕಾರ ವಿಸ್ತರಿಸಿದೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯ ನೀಡಿದ ಮಧ್ಯಂತರ ಆದೇಶ ವಿಚಾರವಾಗಿ ವಾದ ಮಂಡಿಸಬೇಕಿದೆ ಎಂದು ಮೇಲ್ಮನವಿದಾರ ಕಂಪನಿಗಳ ಪರ ವಕೀಲರು ಮನವಿ ಮಾಡಿದ್ದು, ಇದಕ್ಕೆ ಸರ್ಕಾರ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ವಿಸ್ತರಿಸಿದೆ. ಆದರೆ, ಮೇಲ್ಮನವಿದಾರರ ವಾದವನ್ನು ಆಲಿಸಬೇಕಿದೆ ಎಂದು ಹೇಳಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಜುಲೈ 25ಕ್ಕೆ ಮುಂದೂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...