alex Certify ಜೂ. 1 ರಿಂದ ದಂಡ ಪ್ರಯೋಗ ಹಿನ್ನಲೆ: HSRP ಅಳವಡಿಕೆಗೆ ಮುಂದಾದ ವಾಹನ ಮಾಲೀಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂ. 1 ರಿಂದ ದಂಡ ಪ್ರಯೋಗ ಹಿನ್ನಲೆ: HSRP ಅಳವಡಿಕೆಗೆ ಮುಂದಾದ ವಾಹನ ಮಾಲೀಕರು

ಬೆಂಗಳೂರು: 2019ಕ್ಕಿಂತ ಮೊದಲು ಖರೀದಿಸಿದ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ರಾಜ್ಯ ಸಾರಿಗೆ ಇಲಾಖೆ ಮೇ 31ರವರೆಗೆ HSRP ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಜೂನ್ 1ರಿಂದ ಪೊಲೀಸ್ ಇಲಾಖೆ ಜೊತೆಗೂಡಿ HSRP ಇಲ್ಲದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.

ಅಂದ ಹಾಗೆ, HSRP ಅಳವಡಿಕೆಗೆ ಈಗಾಗಲೇ ಎರಡು ಬಾರಿ ಗುಡುವು ವಿಸ್ತರಿಸಲಾಗಿದೆ. ಈ ಹಿಂದೆ 2023ರ ನವೆಂಬರ್ 13ರೊಳಗೆ HSRP ಅಳವಡಿಕೆಗೆ ಗಡುವು ನೀಡಲಾಗಿತ್ತು. ಆಗ ಕೇವಲ 30,000 ವಾಹನಗಳ ಮಾಲೀಕರು ಮಾತ್ರ ನೋಂದಣಿ ಮಾಡಿಕೊಂಡಿದ್ದರಿಂದ ಫೆಬ್ರವರಿ 17ರ ವರೆಗೆ ಗಡುವನ್ನು ವಿಸ್ತರಿಸಲಾಯಿತು. ಆ ವೇಳೆಗೆ 18 ಲಕ್ಷ ವಾಹನಗಳು ಮಾತ್ರ HSRP ಅಳವಡಿಕೆ ಮಾಡಿಕೊಂಡಿದ್ದವು. ಮೇ 31ರವರೆಗೆ HSRP ಅಳವಡಿಕೆ ಗಡುವು ವಿಸ್ತರಿಸಲಾಗಿದೆ.

ಗುಡುವಿನ ನಂತರ HSRP ವಾಹನಗಳ ವಿರುದ್ಧ ದಂಡ ಪ್ರಯೋಗ ಮಾಡುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದ್ದು, ನಂತರದಲ್ಲಿ ವಾಹನ ಮಾಲೀಕರು ನೋಂದಣಿ ಪ್ರಮಾಣ ಹೆಚ್ಚಾಗಿ 18ಲಕ್ಷಕ್ಕೆ ತಲುಪಿದೆ. ಈಗ 52 ಲಕ್ಷ ವಾಹನಗಳ ನೋಂದಣಿಯಾಗಿದೆ. ಎರಡನೇ ತಿಂಗಳಲ್ಲಿ 34 ಲಕ್ಷ ವಾಹನಗಳು HSRP ಅಳವಡಿಸಿಕೊಂಡಿದ್ದು, ಇನ್ನೂ ಸುಮಾರು 1.48 ಕೋಟಿ ವಾಹನಗಳು HSRP ಅಳವಡಿಸಿಕೊಳ್ಳಬೇಕಿದೆ. ನಿಗದಿತ ಗಡುವಿನೊಳಗೆ HSRP ಅಳವಡಿಸದಿದ್ದರೆ ಮತ್ತೊಮ್ಮೆ ಗಡುವು ವಿಸ್ತರಿಸಬಹುದು. ಗಡುವು ವಿಸ್ತರಿಸದಿದ್ದರೆ HSRP ಇಲ್ಲದ ವಾಹನಗಳಿಗೆ 500 ರಿಂದ 1000 ರೂ. ದಂಡ ವಿಧಿಸಲಾಗುವುದು ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...