alex Certify ರೊಟ್ಟಿಗೆ ಉಗುಳುವ ವಿಡಿಯೋ ವೈರಲ್; ಆರೋಪಿ ಅರೆಸ್ಟ್ | Watch Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೊಟ್ಟಿಗೆ ಉಗುಳುವ ವಿಡಿಯೋ ವೈರಲ್; ಆರೋಪಿ ಅರೆಸ್ಟ್ | Watch Video

ಮದುವೆ ಸಮಾರಂಭದಲ್ಲಿ ರೊಟ್ಟಿಗೆ ಉಗುಳುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಸೋಮವಾರ ಆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ನಗರ) ಆಯುಷ್ ವಿಕ್ರಮ್ ಸಿಂಗ್ ಅವರು ರೊಟ್ಟಿ ತಯಾರಿಸುವಾಗ ವ್ಯಕ್ತಿಯೊಬ್ಬ ಉಗುಳುವ ವಿಡಿಯೋ ವೈರಲ್ ಆಗಿದೆ ಎಂದು ತಿಳಿಸಿದ್ದಾರೆ.

ಈ ವಿಡಿಯೋ ಬ್ರಹ್ಮಪುರಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರೇಮ್ ಮಂಟಪದ್ದಾಗಿದ್ದು, ಮದುವೆಯ ಸಮಾರಂಭದಲ್ಲಿ ತಂದೂರ್ ಒಳಗೆ ರೊಟ್ಟಿ ಬೇಯಿಸುವಾಗ ವ್ಯಕ್ತಿಯೊಬ್ಬ ರೊಟ್ಟಿಗೆ ಉಗುಳುತ್ತಿರುವುದು ಕಂಡುಬಂದಿದೆ. ಈ ವಿಷಯವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.

ಫೆಬ್ರವರಿ 21ರ ರಾತ್ರಿ ಈ ಘಟನೆ ನಡೆದಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. “ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ರೊಟ್ಟಿಗಳಿಗೆ ಉಗುಳಿದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಬಂಧಿಸಲಾಗಿದೆ” ಎಂದು ಮೀರತ್ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ.

ಈ ಘಟನೆಯು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಆಹಾರ ಪದಾರ್ಥಗಳಿಗೆ ಉಗುಳುವಂತಹ ಕೃತ್ಯಗಳನ್ನು ಖಂಡಿಸಿ, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...