alex Certify BREAKING: ತಡರಾತ್ರಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಡರಾತ್ರಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಹಿರೇಸೂರು ಗ್ರಾಮದ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಮೃತರು ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ಜಾಫರ್ ಸಾಬ್(60), ಮೊಹಮ್ಮದ್ ಮುಸ್ತಫಾ(36) ಶೋಹಿಬ್(6) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲಗಾ ಗ್ರಾಮದಿಂದ ಔಷಧ ಪಡೆದು ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...