alex Certify BIG BREAKING: ಲಾರಿ –ಬಸ್ ಡಿಕ್ಕಿ; ಮತ್ತೊಂದು ಭೀಕರ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಲಾರಿ –ಬಸ್ ಡಿಕ್ಕಿ; ಮತ್ತೊಂದು ಭೀಕರ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಲಾರಿ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ನಲ್ಲಿ ನಡೆದಿದೆ.

ಮೃತಪಟ್ಟವರು ಮಹಾರಾಷ್ಟ್ರದ ಕೊಲ್ಲಾಪುರದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 26 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಲಾರಿ ಚಾಲಕ ಮತ್ತು ಕ್ಲೀನರ್ ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ. ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಅಕ್ಕಿ ಸಾಗಿಸುತ್ತಿದ್ದ ಲಾರಿ ಮತ್ತು ಕೊಲ್ಲಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಆಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...