
ಹುಬ್ಬಳ್ಳಿ: ಮಾಜಿ ಸಚಿವೆ ಹಾಗೂ ನಟಿ ಉಮಾಶ್ರೀ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಗದಗದಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಕಾರು ಹುಬ್ಬಳ್ಳಿಯಿಂದ ಗದಗ ಕಡೆಗೆ ಸಂಚರಿಸುತ್ತಿದ್ದ ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಲೆನೋ ಮತ್ತು ಇನೋವಾ ಕಾರ್ ನಡುವೆ ಗದಗ ರಸ್ತೆಯ ಭಂಡೀವಾಡ ಬಳಿ ಅಪಘಾತವಾಗಿದ್ದು, ಇನೋವಾ ಕಾರು ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದೆ ಎನ್ನಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.