ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್ ನಲ್ಲಿ ಮತಾಂತರ ಯತ್ನ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಮತ್ತು ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮತಾಂತರಕ್ಕೆ ಯತ್ನಿಸಿದ್ದ ವ್ಯಕ್ತಿಯನ್ನು ಬಂಧಿಸುವುದಾಗಿ ಪೊಲೀಸ್ ಆಯುಕ್ತರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಗಿದೆ. ಹುಬ್ಬಳ್ಳಿಯ ನವನಗರ ಠಾಣೆ ಎದುರು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಚರ್ಚ್ ವೊಂದರಲ್ಲಿ ಮತಾಂತರ ಮಾಡುತ್ತಿರುವ ಆರೋಪ ಕೇಳಿಬಂದಿತ್ತು. ಆರೋಪಿಯನ್ನು ಬಂಧಿಸಬೇಕೆಂದು ಒತ್ತಾಯಿಸಿ ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗಿದ್ದು, ಆಯುಕ್ತರ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಗಿದೆ.