
ಹುಬ್ಬಳ್ಳಿ: ಹೊರ ಜಿಲ್ಲೆಯಿಂದ ಆಗಮಿಸಿದ್ದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಅಭಿಷೇಕ್(27), ಪ್ರವೀಣ್(25) ಬಂಧಿತ ಆರೋಪಿಗಳು. ಫೆಬ್ರವರಿ 28 ರಂದು ಹೊರ ಜಿಲ್ಲೆಯಿಂದ ಹುಬ್ಬಳ್ಳಿಗೆ ಆಗಮಿಸಿದ್ದ ವಿದ್ಯಾರ್ಥಿನಿಯರೊಂದಿಗೆ ಸಲುಗೆ ಬೆಳೆಸಿಕೊಂಡ ಆರೋಪಿಗಳು ಗದಗ, ಹಾವೇರಿ ಮೊದಲಾದ ಕಡೆ ಕರೆದುಕೊಂಡು ಹೋಗಿದ್ದಾರೆ. ಮೂರನೇ ದಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಯುವಕರ ಫೋನ್ ಬಳಸಿಕೊಂಡು ಬಾಲಕಿಯೊಬ್ಬಳು ತನ್ನ ಕುಟುಂಬದವರಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಉಪನಗರ ಠಾಣೆ ಪೊಲೀಸರಿಗೆ ವಿಷಯ ತಿಳಿಸಲಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಉಪನಗರ ಠಾಣೆ ಪೊಲೀಸರು ಬಾಲಕಿಯರನ್ನು ರಕ್ಷಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.