ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದರೊಂದಿಗೆ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮಂಜು ವಾಗ್ಮೊಡೆ(22) ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ಶೇಕಡ 70ರಷ್ಟು ಸುಟ್ಟು ಗಂಭೀರವಾಗಿ ಗಾಯಗೊಂಡಿದ್ದರು.
ಡಿಸೆಂಬರ್ 22 ರಂದು ಸಿಲಿಂಡರ್ ಸ್ಫೋಟಗೊಂಡು 9 ಜನ ಗಾಯಗೊಂಡಿದ್ದರು. ಹುಬ್ಬಳ್ಳಿ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಘಟನೆ ನಡೆದಿತ್ತು. 9 ಜನರ ಪೈಕಿ 6 ಜನ ಸಾವನ್ನಪ್ಪಿದ್ದಾರೆ. ನಿಜಲಿಂಗಪ್ಪ ಬೇಪುರಿ(58), ಸಂಜಯ್ ಸವದತ್ತಿ(18), ಶಂಕರ ಚವ್ಹಾಣ್(29), ಲಿಂಗರಾಜ ಬೀರನೂರ(19), ರಾಜು ಹರ್ಲಾಪುರ(16) ಮೃತಪಟ್ಟಿದ್ದಾರೆ.