ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಯಲ್ಲಪ್ಪ ನಾಪತ್ತೆಯಗೈರುವ ರೋಗಿ. ಬೆಡ್ ಶೀಟ್ ಸಮೇತ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮುತ್ತರಗಿ ಗ್ರಾಮದ ನಿವಾಸಿಯಾಗಿರುವ ಯಲ್ಲಪ್ಪ. ಮೆದುಳು ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಡಿ.26ರಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ಆಸ್ಪತ್ರೆಯ ಬೆಡ್ ನಿಂದ ಎದ್ದು ಹೋಗಿದ್ದ ಯಲ್ಲಪ್ಪ ನಾಪತ್ತೆಯಾಗಿದ್ದಾರೆ.
ಆಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿ ಏಕಾಏಕಿ ನಾಪತ್ತೆಯಗೈದ್ದರೂ ಸಂಬಂಧಿಕರಿಗೆ ವೈದ್ಯರಾಗಲಿ, ಸಿಬ್ಬಂದಿಗಳಾಗಲಿ ಸರುಯಾದ ಮಾಹಿತಿ ನೀಡುತ್ತಿಲ್ಲ. ಇದರಿಂದ ಆತಂಕಗೊಂಡಿರುವ ಸಂಅಬ್ಂಧಿಕರು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರೋಗಿ ಯಲ್ಲಪ್ಪಗೆ ಏನಾದರೂ ಆದರೆ ಅದಕ್ಕೆ ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿಗಳೇ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.