
ಹುಬ್ಬಳ್ಳಿ: ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ ವತಿಯಿಂದ ಫೆಬ್ರವರಿ 6ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅಪ್ರೆಂಟಿಶಿಪ್ ಮತ್ತು ಉದ್ಯೋಗ ಮೇಳ ಆಯೋಜಿಸಲಾಗಿದೆ.
ಹುಬ್ಬಳ್ಳಿ ವಿದ್ಯಾನಗರದ ಸಿ.ಐ. ಮುನವಳ್ಳಿ ಪಾಲಿಟೆಕ್ನಿಕ್ ಕಾಲೇಜಿನ ಸಭಾಭವನದಲ್ಲಿ ಉದ್ಯೋಗ ಮೇಳ ನಡೆಸಲಾಗುವುದು ಎಂದು ಕಾಲೇಜಿನ ಪ್ರಾಚಾರ್ಯ ವೀರೇಶ ಅಂಗಡಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಅಪ್ರೆಂಟಿಶಿಪ್ ತರಬೇತಿ ಯೋಜನೆ ಅನುದಾನದಲ್ಲಿ ಕೇಂದ್ರ ಶಿಕ್ಷಣ ಇಲಾಖೆ, ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಇಂಜಿನಿಯರಿಂಗ್, ಪದವಿ, ಡಿಪ್ಲೋಮಾ ಎಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್ ಅಧ್ಯಯನ ಮಾಡಿದವರು ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು 2020 ರಿಂದ 24ರಲ್ಲಿ ಉತ್ತೀರ್ಣರಾಗಿರಬೇಕು. ಶೈಕ್ಷಣಿಕ ದಾಖಲೆ, ಆಧಾರ್ ಕಾರ್ಡ್, ಭಾವಚಿತ್ರ, ಬಯೋಡೇಟಾ ತರಬೇಕು ಎಂದು ಹೇಳಲಾಗಿದೆ.