ಹುಬ್ಬಳ್ಳಿ: ಕಾರ್ಪೊರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫೈಯಾಜ್ ಎಂಬಾತ ಕೃತ್ಯ ಎಸಗಿದ್ದು, ಆತನನ್ನು ಬಂಧಿಸಲಾಗಿದೆ.
ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ ಎಂಸಿಎ ಓದುತ್ತಿದ್ದರು. ಅದೇ ಕಾಲೇಜಿನಲ್ಲಿ ಆರೋಪಿ ಫೈಯಾಜ್ ಬಿಸಿಎ ಓದುತ್ತಿದ್ದ. ಕಳೆದ ಕೆಲವು ದಿನಗಳಿಂದ ಪ್ರೀತಿಸುವಂತೆ ನೇಹಾಳ ಹಿಂದೆ ಬಿದ್ದಿದ್ದ. ಫಯಾಜ್ ಪ್ರೀತಿಗೆ ನಿರಾಕರಿಸಿದ್ದಕ್ಕೆ ಕುತ್ತಿಗೆಯ ಎರಡು ಕಡೆ ಚಾಕುವಿನಿಂದ ಇರಿದು ನೇಹಾಳನ್ನು ಕೊಲೆ ಮಾಡಿದ್ದಾನೆ.
ಹತ್ಯೆ ಮಾಡಿ ಪರಾರಿ ಆಗುತ್ತಿದ್ದ ಫಯಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ ಪೋಲೀಸರು ಫೈಯಾಜ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.