ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.
ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುವುದು. ಭೀಕರ ರಸ್ತೆ ಅಪಘಾತದಲ್ಲಿ 8 ಜನರು ಮೃತಪಟ್ಟಿದ್ದರು. ಲಾರಿ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿತ್ತು.
ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಜೀವ ಹಾನಿಯಾಗಿರುವುದು ನೋವು ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ. ದುರ್ಘಟನೆಯಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಗಳಿಗೆ ಪಿ.ಎಂ.ಎನ್.ಆರ್.ಎಫ್. ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೂ ತಲಾ 50,000 ರೂ. ನೀಡಲಾಗುವುದು ಎಂದು ಪ್ರಧಾನಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.