alex Certify BIG NEWS: ಟಯರ್ ಸ್ಫೋಟ; ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಪ್ರಯಾಣಿಕರ ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಯರ್ ಸ್ಫೋಟ; ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಪ್ರಯಾಣಿಕರ ಬಸ್

ಹುಬ್ಬಳ್ಳಿ: ಟೈಯರ್ ಸ್ಫೋಟಗೊಂಡ ಪರಿಣಾಮ ಪ್ರಯಾಣಿಕರ ಬಸ್ ವೊಂದು ನಡುರಸ್ತೆಯಲ್ಲಿಯೇ ಧಗಧಗನೇ ಹೊತ್ತಿ ಉರಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ.

ಮುಂಬೈನಿಂದ ಮಂಗಳೂರಿಗೆ ಹೊರಟಿದ್ದ ರೇಷ್ಮಾ ಟ್ರಾವೆಲ್ಸ್ ಗೆ ಸೇರಿದ ಸುಖವಿಹಾರಿ ಬಸ್ ಹುಬ್ಬಳ್ಳಿ ಬೈಪಾಸ್ ರಸ್ತೆಗೆ ಬರುತ್ತಿದ್ದಂತೆಯೇ ಟೈಯರ್ ಸ್ಫೋಟಗೊಂಡಿದ್ದು, ಇದ್ದಕ್ಕಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿಯಲಾರಂಭಿಸಿದೆ. ಬಸ್ ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.

ಬಸ್ ನ ಹಿಂಬದಿ ಟೈಯರ್ ಸ್ಫೋಟಗೊಂಡಿದ್ದು, ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...