
ಹುಬ್ಬಳ್ಳಿ: ಮಳೆ ಅಬ್ಬರದ ನಡುವೆಯೇ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು, ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ.
ಗೋಕುಲ ಗ್ರಾಮದ ದಾರಾವತಿ ಹನುಮಂತ ದೇವಸ್ಥಾನದ ಬೈಪಾಸ್ ಬಳಿ ಅಪಘಾತ ಸಂಭವಿಸಿದ್ದು, ಮೃತದೇಹಗಳು ಗುರುತು ಸಿಗದ ರೀತಿಯಲ್ಲಿ ಛಿದ್ರ ಛಿದ್ರಗೊಂಡಿವೆ.
ಅಪಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹುಬ್ಬಳ್ಳಿ ಉತ್ತರ ಸಂಚಾರಿ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಗಾಗಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.