
ಹುಬ್ಬಳ್ಳಿ: ಯುವಕ ಆಕಾಶ್ ವಾಲ್ಮೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು ಮೂವರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿರುವ ಘಟನೆ ನಡೆದಿದೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಲಿಂಗರಾಜು ನಗರದ ಬಾರ್ ಪಾರ್ಕಿಂಗ್ ಬಳಿ 24 ವರ್ಷದ ಆಕಾಶ್ ವಾಲ್ಮೀಕಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದರು. ಈ ವೇಳೆ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಯುವಕ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದ.
ಆರೋಪಿಗಳನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ಆರೋಪಿಗಳು ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮೂವರು ಆರೊಪಿಗಳ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ.