ಹುಬ್ಬಳ್ಳಿ: ಬೀದರ್ ನಲ್ಲಿ ಎಟಿಎಂ ಹಣ ದರೋಡೆ ಪ್ರಕರಣ, ಮಂಗಳೂರಿನ ಕೋಟೆಕರ್ ಬ್ಯಾಂಕ್ ದರೋಡೆ ಪ್ರಕರಣದ ಬಳಿಕ ಇದೀಗ ಹುಬ್ಬಳ್ಳಿಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ದರೋಡೆಗೆ ಯತ್ನಿಸಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯ ಎಪಿಎಂಸಿಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಯಲ್ಲಿ ದರೋಡೆಗೆ ವಿಫಲ ಯತ್ನ ನಡೆದಿದೆ. ಬ್ಯಾಂಕ್ ನ ಮುಖ್ಯದ್ವಾರದ ಬಾಗಿಲು ಮುರಿದು ಬೀಗ ಕಟ್ ಮಾಡಿರುವ ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದಾರೆ.
ಬ್ಯಾಂಕ್ ದರೋಡೆಗೆ ಯತ್ನ ನಡೆದಿದ್ದರೂ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡದೇ ಹಾರಿಕೆ ಉತ್ತರ ಕೊಡುತ್ತಿದ್ದಾರೆ. ಅಲ್ಲದೇ ಮುರಿದ ಬಾಗಿಲು, ಗೇಟ್ ವೆಲ್ಡಿಂಗ್ ಮಾಡಿಸಿ ಪ್ರಕರಣ ಮುಚ್ಚಿ ಹಾಕುವ ಯನ ಮಾಡಿದ್ದಾರೆ ಎಂಬ ಆರೋಪ ಕೇಲಿಬಂದಿದೆ.