ಹುಬ್ಬಳ್ಳಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಈವರೆಗೆ ನಾಲ್ವರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ 7 ಸಾವಿರಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಮೈಸೂರಿನಲ್ಲಿ ಇಬ್ಬರು ಮಕ್ಕಳು ಬಲಿಯಾಗಿದ್ದರೆ, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಡೆಂಗ್ಯೂ ಸೋಂಕಿನಿಂದ ಮೃತಪಟ್ಟಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಎಫ್.ಕಮ್ಮಾರ್ ಮಾಹಿತಿ ನೀಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ 87 ಡೆಂಗ್ಯೂ ಸೋಂಕಿತರಿಗೆ ಚಿಕಿತ್ಸೆ ನೀದಲಾಗುತ್ತಿದೆ. ಉತ್ತರ ಕನ್ನಡ, ಗದಗ ಹೀಗೆ ಬೇರೆ ಬೇರೆ ಜಿಲ್ಲೆಗಳಿಂದಲೂ ಸೋಂಕಿತರು ಬಂದು ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಡೆಂಗ್ಯೂ ಸೋಂಕು ಹೆಚ್ಚಾಗಿ ಕೊನೇ ಕ್ಷಣದಲ್ಲಿ ಬಂದು ದಾಖಲಾಗಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.
ಪಿಡಿಯಾಟ್ರಿಕ್ ವಾರ್ಡ್ ನಲ್ಲಿ ನಾಲ್ವರು ಡೆಂಗ್ಯೂ ಸೋಂಕಿತರು ಮೃತಪಟ್ಟಿದ್ದಾರೆ. ಮೆಡಿಸಿನ್ ವಾರ್ಡ್ ನಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ನಾಲ್ವರು ಮೃತರು ಬೇರೆ ಬೇರೆ ಜಿಲ್ಲೆಯವರಾಗಿದ್ದಾರೆ. ಧರವಡ ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಯಾವುದೇಸಾವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.